ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹೇಗಾದರೂ ಗ್ಯಾರಂಟಿಗಳನ್ನು ನೆಪಗಳನ್ನು ಕಾರಣವನ್ನು ಹುಡುಕುತ್ತಿದೆ. ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರಿ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಿರುವುದನ್ನು ಖಂಡಿಸಿದ ಅವರು, ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬಾರದು. ಅವುಗಳಿಂದ ಸಾಕಷ್ಟು ಜನರಿಗೆ ಅನುಕೂಲವಾಗಿವೆ ಎಂದು ನೀವೇ ಹೇಳುತ್ತೀರಿ. ಹಾಗಿದ್ದಾಗ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದಿರುವ ನೀವು ಅವುಗಳನ್ನು ಕಿತ್ತುಕೊಳ್ಳುವ ಕೆಲಸವನ್ನು ಮಾಡಬಾರದು ಎಂದ ಹೇಳಿದರು.
ಬಸ್ ಪ್ರಯಾಣ ದರ ಹೆಚ್ಚಳವು ಜನಸಾಮಾನ್ಯರಿಗೆ ಭಾರವಾಗಿದೆ, ಎಂದ ಅವರು ಅತ್ತೆಯದನ್ನು ಅಳಿಯ ದಾನ ಮಾಡಿಸಿದಂತಾಗುಗಿದೆ ಎಂದು ಕಿಡಿಕಾರಿದರು. ಯಾವುದೋ ಸಚಿವರ ಮಕ್ಕಳು ಅಥವಾ ಶಾಸಕರ ಮಕ್ಕಳು ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುವುದಿಲ್ಲ. ಬಸ್ಸಿನಲ್ಲಿ ಪ್ರಯಾಣಿಸುವವರು ಜನಸಾಮಾನ್ಯರು. ದಿನಕ್ಕೆ 10 ರೂಪಾಯಿ ಹೆಚ್ಚಾದರೂ ಅದು ಅವರಿಗೆ ಹೊರೆಯಾಗುತ್ತದೆ ಎಂದು ತಿಳಿಸಿದರು.
ಗ್ಯಾರಂಟಿಗಳನ್ನು ನಿಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ನೆಪ ಹುಡುಕುತ್ತಿದೆ: HDK
