ಹೊಸದಿಲ್ಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಸರ್ಕಾರಿ ವಾಹನವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿದ ಆರೋಪದ ಮೇಲೆ ದಿಲ್ಲಿ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕಿ ಆತಿಶಿ ವಿರುದ್ಧ ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜನವರಿ 8ರಂದು ಅಥಿಶಿಯ ವಿರುದ್ಧ ದೂರು ದಾಖಲಾಗಿದ್ದು, ‘DL-IL-AL1469’ ನೋಂದಣಿ ಸಂಖ್ಯೆ ಹೊಂದಿರುವ ಸರ್ಕಾರಿ ಕಾರು ಚುನಾವಣೆ ಸಂಬಂಧಿತ ಚಟುವಟಿಕೆಗಳಲ್ಲಿ ಬಳಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಚಾರ ಅಥವಾ ಯಾವುದೇ ಚುನಾವಣಾ ಕಾರ್ಯಕ್ಕೆ ಸರ್ಕಾರಿ ವಾಹನಗಳನ್ನು ಬಳಸುವುದನ್ನು ನಿಷೇಧಿಸಿರುವ ಸಾಮಾನ್ಯ ಆಡಳಿತ ಇಲಾಖೆ ನಿಯಮವನ್ನು ಆತಿಶಿ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.