ರಾಷ್ಟ್ರ

ಉತ್ತರಾಖಂಡ: ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಾಪಾರಿಗಳ ತೆರವಿಗೆ ಯತ್ನ, ಹಲ್ಲೆ; ಹಲವರ ವಿರುದ್ಧ ಪ್ರಕರಣ

ಉತ್ತರಾಖಂಡ: ಮುಸ್ಲಿಂ ಅಂಗಡಿ ವ್ಯಾಪಾರಿಗಳನ್ನು ಹೊರಹಾಕಲು ಸ್ಥಳೀಯರನ್ನು ಪ್ರಚೋದಿಸಿ ಮುಸ್ಲಿಂ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ, ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಳಿ ಸೇನಾ ಎಂಬ ಹಿಂದುತ್ವ ಗುಂಪಿನ ಕನಿಷ್ಠ ಐದು ಮಂದಿಯ ವಿರುದ್ಧ ಸ್ಥಳೀಯ ಪೋಲಿಸರು ಎಫ್ಐಆರ್ ದಾಖಲಿಸಿದ್ದಾರೆ. ಕಾಳಿ ಸೇನಾ ಹೆಸರಿನ ಗುಂಪಿನವರ ವಿರುದ್ಧ ದಾಖಲಾಗಿರುವ ಪ್ರಕರಣದ ಪ್ರಕಾರ, ಫೆಬ್ರವರಿ 4ರಂದು ಸುಮಾರು 50-60 ಜನರ ಗುಂಪು ನಾಥುವಾಲಾ ಪ್ರದೇಶದಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟಿಸಲು ಸಭೆ ನಡೆಸಿತ್ತು. ಈ ಸಭೆಯಲ್ಲಿ ಮಾತನಾಡಿದವರು ಘಟನೆಗೆ ಕೋಮುಬಣ್ಣ ನೀಡಿ ಜನರನ್ನು ಪ್ರಚೋದಿಸಿದ್ದಾರೆ.

ಅವರು ಪ್ರಚೋದನಾಕಾರಿ ಭಾಷಣದಲ್ಲಿ, ಅಲ್ಲಿನ ಮುಸ್ಲಿಂ ಹಾಗೂ ಇತರೆ ಸಮುದಾಯದ ಬಾಡಿಗೆ ಅಂಗಡಿಯವರ ಮೇಲೆ ಹಲ್ಲೆ ನಡೆಸುವಂತೆ ಮತ್ತು ಅವರನ್ನು ಹೊರಹಾಕುವಂತೆ ಸ್ಥಳೀಯರನ್ನು ಪ್ರೇರೇಪಿಸಿದ್ದರು. ನಂತರ, ಜಾಥಾ ನಡೆಸಿದ ಪ್ರತಿಭಟನಾಕಾರರು ಮಾರ್ಗದಲ್ಲಿದ್ದ ಇತರೆ ಸಮುದಾಯದ ಅಂಗಡಿಗಳ ನಾಮಫಲಕಗಳು ಹಾಗೂ ಬ್ಯಾನರ್ಗಳನ್ನು ಧ್ವಂಸಗೊಳಿಸಿದ್ದರು.

ಫೆಬ್ರವರಿ 5ರಂದು, ಮತ್ತೆ ಸಭೆ ಸೇರಿದ್ದ ಕಾಳಿ ಸೇನಾ ಗುಂಪು ಡೋನಾಲಿ ಜಂಕ್ಷನ್‌ನಲ್ಲಿ ಮತ್ತೊಂದು ಸಾರ್ವಜನಿಕ ಸಭೆ ಆಯೋಜಿಸಿ ಮತ್ತೆ ಜನರನ್ನು ಪ್ರಚೋದಿಸಿತ್ತು. ಈ ಸಭೆಯಲ್ಲಿ, ಬಾಡಿಗೆದಾರರನ್ನು ಏಳು ದಿನಗಳಲ್ಲಿ ಖಾಲಿ ಮಾಡುವಂತೆ ಬೆದರಿಕೆ ಹಾಕಲಾಗಿತ್ತು. ಇಲ್ಲದಿದ್ದರೆ ಅವರು ಬಲವಂತವಾಗಿ ಅವರನ್ನು ಹೊರಹಾಕುತ್ತೇವೆ ಎಂಬ ಎಚ್ಚರಿಕೆ ನೀಡಲಾಗಿತ್ತು.

ಅದೇ ದಿನ, ಕಾಳಿ ಸೇನಾ ಗುಂಪಿನವರು ಲೋವರ್ ಟುನ್ವಾಲಾದ ವಾರದ ಸಂತೆಯಲ್ಲಿ ಬಲವಂತವಾಗಿ ಮುಸ್ಲಿಂ ವ್ಯಾಪಾರಿಗಳನ್ನು ತೆರವುಗೊಳಿಸಿ, ಮಾರುಕಟ್ಟೆಯನ್ನು ‘ಸನಾತನ’ ಎಂದು ಘೋಷಿಸಿದ್ದರು. ಇತರ ಸಮುದಾಯದ ವ್ಯಾಪಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಕಿಡಿಗೇಡಿಗಳು, ‘ಅಂಗಡಿಗಳನ್ನು ತೆರೆದರೆ ಕೊಲ್ಲುತ್ತೇವೆ’ ಎಂದು ಬೆದರಿಕೆ ಹಾಕಿದ್ದರು. ಈ ಪ್ರಚೋದನಾತ್ಮಕ ಭಾಷಣಗಳಿಂದಾಗಿ ಪ್ರದೇಶದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿತ್ತು ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಭೂಪೇಶ ಜೋಶಿ, ವೈಭವ ಪನ್ವಾರ್, ಅಜಯ್ ಕ್ಯಾಪ್ಟನ್, ಆಚಾರ್ಯ ವಿಪುಲ ಬಂಗ್ವಾಲ್, ನಿವೃತ್ತ ಯೋಧ ರಾಜೇಂದ್ರ ಸಿಂಗ್ ನೇಗಿ ಮತ್ತು ಇತರರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

16 minutes ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

2 weeks ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 month ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 month ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 months ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 months ago