Contact Information

Jattipalya, Chennenahalli, Magadi Road,
Bengaluru

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆ ನಡೆದ ಬಳಿಕ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿಟ್ಟಿರುವುದಾಗಿ ತಿಳಿದುಬಂದಿದೆ. ಈ ಪ್ರಕರಣದ ವಿಚಾರವಾಗಿ ಯಶವಂತಪುರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಮಂಜುಳಾ ಅವರ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದಿಲ್ಲ. ಈ ಕುರಿತು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಹಳ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದ ಮಂಜುಳಾ, ಇತ್ತೀಚೆಗೆ ತಮ್ಮ ಪತಿಯನ್ನು ಕಳೆದುಕೊಂಡ ಕಾರಣ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಕ್ಷದ ಕಾರ್ಯಚಟುವಟಿಕೆಗಳಿಂದ  ದೂರವಾಗಿದ್ದರು ಎಂದು ಹೇಳಲಾಗುತ್ತಿದೆ.

ಯಾರಿಗಾದರೂ ಆತ್ಮಹತ್ಯೆ ಯೋಚನೆ ಬಂದಲ್ಲಿ ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಗೆ ಕರೆಮಾಡಿ ಸೂಕ್ತ ಸಮಾಲೋಚನೆ ಪಡೆಯಬಹುದು. ಅದಲ್ಲದೆ Tele-MANAS ನ 14416 ಸಂಖ್ಯೆನ್ನೂ ಸಂಪರ್ಕಿಸಬಹುದು.

Share:

administrator

Leave a Reply

Your email address will not be published. Required fields are marked *