ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆ ನಡೆದ ಬಳಿಕ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿಟ್ಟಿರುವುದಾಗಿ ತಿಳಿದುಬಂದಿದೆ. ಈ ಪ್ರಕರಣದ ವಿಚಾರವಾಗಿ ಯಶವಂತಪುರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಮಂಜುಳಾ ಅವರ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದಿಲ್ಲ. ಈ ಕುರಿತು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಹಳ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದ ಮಂಜುಳಾ, ಇತ್ತೀಚೆಗೆ ತಮ್ಮ ಪತಿಯನ್ನು ಕಳೆದುಕೊಂಡ ಕಾರಣ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರವಾಗಿದ್ದರು ಎಂದು ಹೇಳಲಾಗುತ್ತಿದೆ.
ಯಾರಿಗಾದರೂ ಆತ್ಮಹತ್ಯೆ ಯೋಚನೆ ಬಂದಲ್ಲಿ ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಗೆ ಕರೆಮಾಡಿ ಸೂಕ್ತ ಸಮಾಲೋಚನೆ ಪಡೆಯಬಹುದು. ಅದಲ್ಲದೆ Tele-MANAS ನ 14416 ಸಂಖ್ಯೆನ್ನೂ ಸಂಪರ್ಕಿಸಬಹುದು.
ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…
ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…
ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…
ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯಿರುವ ಸಿಮೆಂಟ್ ಕಂಪನಿಯಲ್ಲಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟಿರುವ…
ಹೈದರಾಬಾದ್: ಗುಂಪುಹತ್ಯೆಯಿಂದ ತನ್ನ ತಂದೆಯನ್ನು ರಕ್ಷಿಸಲು ಮುಂದಾದ 16 ವರ್ಷದ ಅಲಿಯಾ ಬೇಗಂ, ದುಷ್ಕರ್ಮಿಗಳ ಕಲ್ಲಿನ ಏಟಿಗೆ ಬಲಿಯಾಗಿದ್ದಾಳೆ. ಈ…