Contact Information

Jattipalya, Chennenahalli, Magadi Road,
Bengaluru

ಬೆಂಗಳೂರು: ಬೀದರ್‌ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಬಿಜೆಪಿ ಆರೋಪಗಳು ರಾಜಕೀಯ ದ್ವೇಷದಿಂದ ಕೂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದರು. ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜಿನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಒತ್ತಾಯದ ಕುರಿತು ನೀಡಿದ ಸಿಎಂ “ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್‌ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಯವರ ಹೆಸರಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರ ಇರುವ ಬಗ್ಗೆ ಯಾವುದೇ ಸಾಕ್ಷ್ಯವೂ ಇಲ್ಲ. ಹಾಗಾಗಿ ಅವರು ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು. ಹಿಂದೆ ಇಂತಹದೇ ಪ್ರಕರಣದಲ್ಲಿ ಬಿಜೆಪಿಯ ಕೆ.ಎಸ್. ಈಶ್ವರಪ್ಪ ಅವರ ಹೆಸರನ್ನು ಮೃತ ವ್ಯಕ್ತಿ ಡೆತ್ ನೋಟ್ ನಲ್ಲಿ ಬರೆದಿದ್ದ. ಈ ಪ್ರಕರಣ ಅದಕ್ಕಿಂತ ಭಿನ್ನ ಎಂದ ಸಿದ್ದರಾಮಯ್ಯ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

Share:

administrator

Leave a Reply

Your email address will not be published. Required fields are marked *