ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಬಿಜೆಪಿ ಆರೋಪಗಳು ರಾಜಕೀಯ ದ್ವೇಷದಿಂದ ಕೂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದರು. ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಒತ್ತಾಯದ ಕುರಿತು ನೀಡಿದ ಸಿಎಂ “ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್‌ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರ ಇರುವ ಬಗ್ಗೆ ಯಾವುದೇ ಸಾಕ್ಷ್ಯವೂ ಇಲ್ಲ. ಹಾಗಾಗಿ ಅವರು ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು. ಹಿಂದೆ ಇಂತಹದೇ ಪ್ರಕರಣದಲ್ಲಿ ಬಿಜೆಪಿಯ ಕೆ.ಎಸ್. ಈಶ್ವರಪ್ಪ ಅವರ ಹೆಸರನ್ನು ಮೃತ ವ್ಯಕ್ತಿ ಡೆತ್ ನೋಟ್ ನಲ್ಲಿ ಬರೆದಿದ್ದ. ಈ ಪ್ರಕರಣ ಅದಕ್ಕಿಂತ ಭಿನ್ನ ಎಂದ ಸಿದ್ದರಾಮಯ್ಯ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…
ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…
ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…
ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…
ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…
ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…