ಪೇಶಾವರ : ನೈಋತ್ಯ ಪಾಕಿಸ್ತಾನದಲ್ಲಿ ಕಲ್ಲಿದ್ದಲ ಗಣಿ ಬಳಿ ಸ್ಫೋಟ ಸಂಭವಿಸಿದ್ದು ಕನಿಷ್ಠ 9 ಕಾರ್ಮಿಕರು ಸಾವನ್ನಪ್ಪಿದ್ದು ಇತರ 7 ಮಂದಿ ಗಾಯಗೊಂಡಿರುವುದಾಗಿ ಜಿಲ್ಲಾಧಿಕಾರಿಗಳನ್ನು ಉಲ್ಲೇಖಿಸಿ ಜಿಯೊ ನ್ಯೂಸ್ ಶುಕ್ರವಾರ ವರದಿ ಮಾಡಿದೆ. ಪ್ರಕ್ಷುಬ್ಧ ಬಲೂಚಿಸ್ತಾನದ ಹರ್ನಯ್ ವಲಯದಲ್ಲಿ ರಸ್ತೆ ಪಕ್ಕ ಇರಿಸಿದ್ದ ಬಾಂಬನ್ನು ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಬರುತ್ತಿದ್ದಂತೆಯೇ ಸುಧಾರಿತ ಸ್ಫೋಟಕ ಸಾಧನ(ಐಇಡಿ)ಬಳಸಿ ಸ್ಫೋಟಿಸಲಾಗಿದೆ.
ಕನಿಷ್ಠ 9 ಕಾರ್ಮಿಕರು ಸಾವನ್ನಪ್ಪಿದ್ದು ಇತರ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದಿ ಎಕ್ಸ್‍ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಕಾರ್ಮಿಕರು ಸ್ವಾತ್ ಮತ್ತು ಶಾಂಗ್ಲಾ ಜಿಲ್ಲೆಗಳ ನಿವಾಸಿಗಳಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಸ್ಫೋಟಕ್ಕೆ ಹೊಣೆಯನ್ನು ಯಾವುದೇ ಗುಂಪು ವಹಿಸಿಲ್ಲ. ತನಿಖೆ ಮುಂದುವರಿಸಲಾಗಿದೆ ಎಂದು ಉಪ ಜಿಲ್ಲಾಧಿಕಾರಿ ಹೇಳಿದ್ದಾರೆ.
ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…
ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…
ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…
ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…
ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…
ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…