ರಾಷ್ಟ್ರ

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧಿತ ಮಹಿಳೆಗೆ ಪದ್ಮಭೂಷಣ ಪ್ರಶಸ್ತಿ

ಹೋಸದಿಲ್ಲಿ: ಅಯೋಧ್ಯೆ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದುತ್ವವಾದಿ ನಾಯಕಿ ಋತಂಭರಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಪದ್ಮ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾ ದಿನ ಘೋಷಿಸಲಾಯಿತು. ಮುಂದಿನ ಮಾರ್ಚ್‌ ಅಥವಾ ಏಪ್ರಿಲ್‌ ತಿಂಗಳಿನಲ್ಲಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ವಿಶ್ವ ಹಿಂದೂ ಪರಿಷತ್ತಿನ ಮಹಿಳಾ ಘಟಕ, ದುರ್ಗಾ ವಾಹಿನಿಯ ಸಂಸ್ಥಾಪಕಿ ಋತಂಭರ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. 1980 ಮತ್ತು 1990ರ ದಶಕಗಳಲ್ಲಿ ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರ ಅಭಿಯಾನದಲ್ಲಿ ಅವರು ದೇಶಾದ್ಯಾಂತ ಭಾಷಣಗಳನ್ನು ಮಾಡಿದ್ದರು. 1992 ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಅದರ ಹಿನ್ನಲೆಯಲ್ಲಿ ದೇಶಾದ್ಯಂತ ಕೋಮುಗಲಭೆಗಳು ಉಂಟಾಗಿದ್ದವು. ಈ ದ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಐದು ದಿನಗಳ ನಂತರ ಋತಂಭರ ಅವರನ್ನು ಬಂಧಿಸಲಾಗಿತ್ತು.

ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿ.ಬಿ.ಐ.) 32 ಮಂದಿಯ ಮೇಲೆ ಆರೋಪ ಹೊರಿಸಿತ್ತು. ಇದರಲ್ಲಿ ಋತಂಭರ ಹೆಸರು ಸಹ ಸೇರಿತ್ತು. 2020ರ ಸೆಪ್ಟೆಂಬರ್‌ನಲ್ಲಿ ಈ ಎಲ್ಲಾ 32 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

4 hours ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

2 weeks ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 month ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 month ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 months ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 months ago