Contact Information

Jattipalya, Chennenahalli, Magadi Road,
Bengaluru

ಬೆಂಗಳೂರು :  ಕ್ಯಾನ್ಸರ್ ಸಂಬಂಧಿತ ಶಸ್ತ್ರಚಿಕಿತ್ಸೆ ಅಮೆರಿಕದ ಮಿಯಾಮಿ ಆಸ್ಪತ್ರೆಯಲ್ಲಿ ದಾಖಲಾಗಿ, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮುಗಿಸಿಕೊಂಡಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ತಮ್ಮ ಆರೋಗ್ಯದ ಚೇತರಿಕೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಸ್ತ್ರಚಿಕಿತ್ಸೆಗಾಗಿ ಅವರು ಕೆಲವು ದಿನಗಳ ಹಿಂದೆ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್​ಸ್ಟಿಟ್ಯೂಟ್​ ಗೆ ದಾಖಲಾಗಿದ್ದರು. ಆ ಸಂದರ್ಭದಲ್ಲಿ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತು ಅವರ ಬಾವಮೈದ ಮಧು ಬಂಗಾರಪ್ಪ ವಿವರಗಳನ್ನು ಹಂಚಿಕೊಂಡಿದ್ದರು. ಹೊಸ ವರ್ಷದ ದಿನ ಸ್ವತಃ ಶಿವರಾಜ್ ಕುಮಾರ್ ಅವರೇ ವಿಡಿಯೋ ಮಾಡಿ ತಮ್ಮ ಅಭಿಮಾನಿಗಳೊಂದಿಗೆ ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅಭಿಮಾನಿಗಳ ಪ್ರೀತಿಯ ಹಾರೈಕೆ ಮತ್ತು ಪ್ರಾರ್ಥನೆಗಳಿಗಾಗಿ ಧನ್ಯವಾದ ತಿಳಿಸಿದ್ದಾರೆ.

Share:

administrator

Leave a Reply

Your email address will not be published. Required fields are marked *