ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ ಆರೋಪ: 3 MLC ಸೇರಿ 13 ಬಿಜೆಪಿ ನಾಯಕರ ವಿರುದ್ಧ FIR

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣವೆಂದು ಆರೋಪಿಸಿ ಪೋಸ್ಟರ್ ಅಂಟಿಸಿದ ಪ್ರಕರಣದಲ್ಲಿ 13 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ, ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪಾತ್ರವಿದೆ ಎಂದು ಆರೋಪಿಸಿ ಘೋಷಣೆ ಕೂಗಿ, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿದ ಪ್ರಕರಣದಲ್ಲಿ ಮೂವರು ವಿಧಾನ ಪರಿಷತ್ ಸದಸ್ಯರು ಸೇರಿದಂತೆ 13 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಎಫ್ ಐ ಆರ್ ನಲ್ಲಿರುವ ಮುಖ್ಯ ಹೆಸರುಗಳು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸದಸ್ಯರುಗಳಾದ ಸಿ.ಟಿ. ರವಿ ಮತ್ತು ರವಿಕುಮಾರ್. ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ಹಾಗೂ ಹಲವು ಬಿಜೆಪಿ ಮುಖಂಡರು ಇದರಲ್ಲಿ ಸೇರಿದ್ದಾರೆ.

ಹೈಗ್ರೌಂಡ್ಸ್ ಠಾಣೆಯ ಪಿಎಸ್ಸೈ ಶಶಿಧರ್ ವಣ್ಣೂರು ನೀಡಿದ ದೂರಿನ ಮೇರೆಗೆ, ಈ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಸ್ವತ್ತಿಗೆ ಹಾನಿ ಹಾಗೂ ನಗರ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡಿದ ಆರೋಪದಡಿ ಎಫ್ ಐ ಆರ್ ಮಾಡಲಾಗಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸರ್ಕಾರ ಕಾರಣವೆಂದು ಆರೋಪಿಸಿ ಡಿಸೆಂಬರ್ 31ರಂದು ಬೆಂಗಳೂರಿನಲ್ಲಿನ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದ್ದರು.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

11 months ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

12 months ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 year ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 year ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

1 year ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

1 year ago