ರಾಷ್ಟ್ರ

ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಬಡೋಲಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ

ಹಿಮಾಚಲ ಪ್ರದೇಶ: ಶಿಮ್ಲಾದ ಕಸೌಲಿಯಲ್ಲಿರುವ ಸರ್ಕಾರಿ ಹೋಟೆಲ್‌ನಲ್ಲಿ ಹರ್ಯಾಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಮತ್ತು ಗಾಯಕ ಜೈ ಭಗವಾನ್ ಅಲಿಯಾಸ್ ರಾಕಿ ಉದ್ಯೋಗ ಕೊಡಿಸುವ ಅಮಿಷವೊಡ್ಡಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ದೆಹಲಿ ಮೂಲದ ಮಾಡೆಲಿಂಗ್ ಕ್ಷೇತ್ರದ ಯುವತಿ ದೂರು ಕೊಟ್ಟಿದ್ದಾರೆ. ದೂರನ್ನು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವತಿಯ ದೂರಿನಲ್ಲಿ, ಬಡೋಲಿ ಮತ್ತು ರಾಕಿ ಅತ್ಯಾಚಾರ ಎಸಗಿರುವುದಲ್ಲದೆ, ಕೃತ್ಯವನ್ನು ವೀಡಿಯೋ ಚಿತ್ರೀಕರಿಸಿ, ಆ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಸಹ ಆರೋಪ ಮಾಡಿದ್ದಾರೆ.

ದೂರು ಮತ್ತು ಎಫ್‌ಐಆರ್ ವಿವರ

ಡಿ.13 ರಂದು ಹಿಮಾಚಲದ ಸೋಲನ್ ಜಿಲ್ಲೆಯ ಕಸೌಲಿಯಲ್ಲಿ ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಮಂಗಳವಾರದಂದು ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು.

ಯುವತಿಯ ದೂರಿನ ಪ್ರಕಾರ ಜುಲೈ 3, 2023 ರಂದು ಕಸೌಲಿಯ ಹೋಟೆಲ್‌ನಲ್ಲಿ ಸ್ನೇಹಿತನೊಂದಿಗೆ ತಂಗಿದ್ದಾಗ, ಬಡೋಲಿ ತನ್ನನ್ನು ರಾಜಕಾರಣಿ ಎಂದು, ರಾಕಿ ತನ್ನನ್ನು ಗಾಯಕನೆಂದು ಪರಿಚಯಿಸಿಕೊಂಡಿದ್ದರು. ನಂತರ ಒಟ್ಟು ಆರು ವ್ಯಕ್ತಿಗಳು ಸರ್ಕಾರಿ ಕೆಲಸ ಮತ್ತು ಸಂಗೀತ ಕ್ಷೇತ್ರದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ, ಅವರನ್ನು ತಮ್ಮ ಕೊಠಡಿಗೆ ಕರೆದೊಯ್ದಿದ್ದಾರೆ.

ಕೊಠಡಿಯಲ್ಲಿ, ಯುವತಿಗೆ ಮದ್ಯಪಾನ ಮಾಡಲು ಒತ್ತಾಯಿಸಲಾಗಿದ್ದು, ನಿರಾಕರಿಸಿದ ನಂತರ ಅತ್ಯಾಚಾರ ಎಸಗಿದ್ದಾರೆ. ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿ, ಈ ವಿಷಯ ಬಹಿರಂಗ ಮಾಡಿದರೆ ಪ್ರಾಣಹಾನಿ ಮಾಡುವುದಾಗಿ ಬೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಎಫ್‌ಐಆರ್ ಪ್ರಕಾರ, ಘಟನೆ ನಡೆದ ಎರಡು ತಿಂಗಳ ನಂತರ, ಪಂಚಕುಲದಲ್ಲಿರುವ ರಾಕಿಯ ಮನೆಯಲ್ಲಿ ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಕ್ಕಿಸುವುದಾಗಿ ಆರೋಪಿಗಳು ಮತ್ತೊಮ್ಮೆ ಬೆದರಿಸಿದ್ದಾರೆ.

AddThis Website Tools
admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

3 weeks ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

1 month ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

2 months ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

2 months ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

3 months ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

3 months ago