ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿ ಕಾಟನ್ ಪೇಟೆ ಪೊಲೀಸರು ಶೇಖ್ ನಸ್ರೂ (35) ಹೆಸರಿನ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿ ಈ ಕೃತ್ಯ ನಡೆಸಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಹಸುಗಳನ್ನು ಕಟ್ಟಿದ್ದ ಶೆಡ್ಡಿನಿಂದ 50 ಮೀಟರ್ ದೂರದ ಪ್ಲಾಸ್ಟಿಕ್ ಹಾಗೂ ಬ್ಯಾಗ್ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಕೃತ್ಯವನ್ನು ನಸ್ರೂ ಒಬ್ಬನೇ ಮಾಡಿದ್ದು, ಬೇರೆ ಯಾರೂ ಇವರ ಜೊತೆ ಇರಲಿಲ್ಲ ಎಂದು ಆರೋಪಿ ತಿಳಿಸಿದ್ದಾನೆ. ಆದರೂ ನಾವು ಇನ್ನಷ್ಟು ತನಿಖೆ ಮಾಡಿ ಅವನ ಮಾತನ್ನು ಖಾತರಿಪಡಿಸಿಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ತಕ್ಷಣವೇ ಮೂರೂ ಹಸುಗಳನ್ನು ಹತ್ತಿರದ ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅವುಗಳಿಗೆ ಚಿಕಿತ್ಸೆ ನೀಡಲಾಗಿದ್ದು ಮೂರೂ ಹಸುಗಳು ಪ್ರಾಣಾಪಾಯದಿಂದ ಪಾರಾಗಿವೆ ಎಂದು ತಿಳಿದು ಬಂದಿದೆ.
ಆರೋಪಿಯ ವಿರುದ್ಧ ಬಿಎನ್ಎಸ್ ಸೆಕ್ಷನ್ 325 ಅಡಿ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ಅವನನ್ನು ಜನವರಿ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…
ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…
ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…
ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…
ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…
ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…