ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತದ ನಡುವೆ ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್ ಅವರಿಗೆ ಬಿಜೆಪಿ ಶಿಸ್ತು ಪಾಲನಾ ಸಮಿತಿಯು ನೋಟಿಸ್ ನೀಡಿದ್ದು, 72 ಗಂಟೆಗಳ ಒಳಗೆ ಉತ್ತರಿಸುವಂತೆ ಸೂಚಿಸಿದೆ. ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದರೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶೋಕಾಸ್ ನೋಟಿಸಿನಲ್ಲಿ ಎಚ್ಚರಿಕೆ ನೀಡಲಾಗಿದೆ.
‘ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿದರೂ, ಯತ್ನಾಳ್ ಅವರು ಶಿಸ್ತು ಉಲ್ಲಂಘನೆ ಮಾಡುತ್ತಲೇ ಬಂದಿದ್ದೀರಿ. ಇದು ಗಂಭೀರ ವಿಚಾರವಾಗಿದ್ದು, ನೋಟಿಸ್ ಗೆ ಉತ್ತರ ನೀಡದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಶಿಸ್ತು ಪಾಲನಾ ಸಮಿತಿ ನೋಟಿಸ್ ನಲ್ಲಿ ಎಚ್ಚರಿಕೆ ನೀಡಿದೆ.