Contact Information

Jattipalya, Chennenahalli, Magadi Road,
Bengaluru

ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿ ಕಾಟನ್ ಪೇಟೆ ಪೊಲೀಸರು ಶೇಖ್ ನಸ್ರೂ (35) ಹೆಸರಿನ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿ ಈ ಕೃತ್ಯ ನಡೆಸಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಹಸುಗಳನ್ನು ಕಟ್ಟಿದ್ದ ಶೆಡ್ಡಿನಿಂದ 50 ಮೀಟರ್ ದೂರದ ಪ್ಲಾಸ್ಟಿಕ್ ಹಾಗೂ ಬ್ಯಾಗ್ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಕೃತ್ಯವನ್ನು ನಸ್ರೂ ಒಬ್ಬನೇ ಮಾಡಿದ್ದು, ಬೇರೆ ಯಾರೂ ಇವರ ಜೊತೆ ಇರಲಿಲ್ಲ ಎಂದು ಆರೋಪಿ ತಿಳಿಸಿದ್ದಾನೆ. ಆದರೂ  ನಾವು ಇನ್ನಷ್ಟು ತನಿಖೆ ಮಾಡಿ ಅವನ ಮಾತನ್ನು ಖಾತರಿಪಡಿಸಿಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ತಕ್ಷಣವೇ ಮೂರೂ ಹಸುಗಳನ್ನು ಹತ್ತಿರದ ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅವುಗಳಿಗೆ ಚಿಕಿತ್ಸೆ ನೀಡಲಾಗಿದ್ದು ಮೂರೂ ಹಸುಗಳು ಪ್ರಾಣಾಪಾಯದಿಂದ ಪಾರಾಗಿವೆ ಎಂದು ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಬಿಎನ್ಎಸ್ ಸೆಕ್ಷನ್ 325 ಅಡಿ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ಅವನನ್ನು ಜನವರಿ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share:

administrator

Leave a Reply

Your email address will not be published. Required fields are marked *