ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ತಾಯಿ ಭಾಗ್ಯ ಎನ್ನುವವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಮಕ್ಕಳನ್ನು ತನು ನಿಂಗರಾಜ ಭಜಂತ್ರಿ (5), ರಕ್ಷಾ ಭಜಂತ್ರಿ (3), ಹಸನ್ ನಿಂಗರಾಜ ಭಜಂತ್ರಿ (2), ಹುಸೇನ್ ಭಜಂತ್ರಿ ಎಂದು ಗುರುತಿಸಲಾಗಿದೆ.
ಇವರು ಮೂಲತಃ ಕೊಲಾರ ಜಿಲ್ಲೆಯ ತೆಲಗಿ ಗ್ರಾಮದ ನಿವಾಸಿಗಳು ಎಂದು ಮಾಹಿತಿ ದೊರಕಿದೆ. ಇಬ್ಬರು ಮಕ್ಕಳ ಮೃತದೇಹಗಳನ್ನು ಮೀನುಗಾರರು ಹೊರತೆಗೆದಿದ್ದು, ಉಳಿದಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿಡಗುಂದಿ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.