ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯಿರುವ ಸಿಮೆಂಟ್ ಕಂಪನಿಯಲ್ಲಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಕಾರ್ಮಿಕನನ್ನು ಬಿಹಾರ ಮೂಲದ 35 ವರ್ಷದ ಚಂದನ್ ಸಿಂಗ್ ಎಂದು ಗುರುತಿಸಲಾಗಿದೆ. ಸಿಮೆಂಟ್ ಕಂಪನಿಯ ಸಿಬ್ಬಂದಿ ಮೃತದೇಹವನ್ನು ಅಲ್ಲಿಂದ ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಬದುಕಿದ್ದಾಗ ಕಾರ್ಮಿಕರಿಗೆ ಸೂಕ್ತ ಗೌರವ ನೀಡದ ಕಂಪನಿಗಳು ಕನಿಷ್ಠ ಸಾವಿನಲ್ಲಾದರೂ ಮಾನವೀಯತೆ ತೋರಿಸಬೇಕು ಎಂದು ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.