ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್ ನಿದಿ ಹಂಚಿಕೆ ಬಗ್ಗೆ ಮತ್ತೊಮ್ಮೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ವಿದೇಶಿ ಚುನಾವಣೆಗೆ ಅಷ್ಟು ದೊಡ್ಡ ಮೊತ್ತವನ್ನು ಹಂಚುವುದು ತರ್ಕಸಮ್ಮತವೇ ಎಂದು ಪ್ರಶ್ನಿಸುವುದರ ಜೊತೆಗೆ, ಅಮೆರಿಕದ ಚುನಾವಣೆಯಲ್ಲಿ ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ‘ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್ನ್ಯಾಷನಲ್ ಡೆವಲಪ್ಮೆಂಟ್’ (ಯುಎಸ್ಎಐಡಿ) ಮೂಲಕ ಹಣ ನೀಡುವ ಬಗ್ಗೆ ತಮ್ಮ ವಿರೋಧವನ್ನು ಪುನರುಚ್ಚರಿಸಿದರು. ಭಾರತಕ್ಕೆ ಆರ್ಥಿಕ ನೆರವಿನ ಅಗತ್ಯವಿಲ್ಲ, ಏಕೆಂದರೆ ಅದು ಈಗಾಗಲೇ ಅಮೆರಿಕದಿಂದ ಲಾಭಗಳನ್ನು ಪಡೆಯುತ್ತಿದೆ ಮತ್ತು ಜಾಗತಿಕವಾಗಿ ಇತರ ರಾಷ್ಟ್ರಗಳಿಗೆ ಹೆಚ್ಚಿನ ಸುಂಕಗಳನ್ನು ವಿಧಿಸುತ್ತದೆ ಎಂದು ಹೇಳಿದ್ದಾರೆ.