Contact Information

Jattipalya, Chennenahalli, Magadi Road,
Bengaluru

ಹಾವೇರಿ: ಜಿಲ್ಲೆಯ ಸವಣೂರು ತಾಲ್ಲೂಕಿನ ಕುರುಬರಮಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹40 ಲಕ್ಷ ದುರುಪಯೋಗ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪಿಡಿಒ ಅನ್ನಪೂರ್ಣ ಸಿಂಪಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಜೊತೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಈ ಅಕ್ರಮದಲ್ಲಿ ಶಾಮೀಲಾಗಿರುವುದರಿಂದ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

2022-23ನೇ ಸಾಲಿನಲ್ಲಿ ಚಳ್ಳಾಳ ಗ್ರಾಮದ 185ನೇ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ‘ನರೇಗಾ’ ಮತ್ತು ವಿಶೇಷ ಅಭಿವೃದ್ಧಿ ಯೋಜನೆಯಡಿ ₹15 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿತ್ತು. ನಕಲಿ ದಾಖಲೆಗಳ ಮೂಲಕ ಕಟ್ಟಡ ನಿರ್ಮಾಣ ನಡೆಸಿರುವಂತೆ ತೋರಿಸಿ ಈ ಹಣವನ್ನು ಡ್ರಾ ಮಾಡಲಾಗಿತ್ತು. ಆದರೆ, ಸ್ಥಳ ಪರಿಶೀಲನೆ ವೇಳೆ ಯಾವುದೇ ಕಟ್ಟಡ ನಿರ್ಮಾಣವಾಗಿಲ್ಲ ಎಂಬುದು ಗೊತ್ತಾಗಿದೆ.

Share:

administrator

Leave a Reply

Your email address will not be published. Required fields are marked *