ಬೆಂಗಳೂರು: ಇನ್ಫೋಸಿಸ್ ಸಂಸ್ಥೆಯಲ್ಲಿ ಒಂಬತ್ತು ವರ್ಷಗಳ ಕಾಲ ಕೇವಲ 35,000 ರೂ. ವೇತನಕ್ಕೆ ಕೆಲಸ ಮಾಡಿದ್ದೇನೆ ಎಂದು ಕಂಪನಿಯ ಮಾಜಿ ಉದ್ಯೋಗಿಯೊಬ್ಬರು ರೆಡಿಟ್ ಪೋಸ್ಟ್ ಮೂಲಕ ಬಹಿರಂಗಪಡಿಸಿದ್ದಾರೆ. ಟೆಕ್ನಿಕಲ್ ಉದ್ಯೋಗಿಯಾಗಿದ್ದ ತನ್ನ ಅನುಭವವನ್ನು “ಸರಪಳಿ ಇಲ್ಲದ ಗುಲಾಮಗಿರಿ” ಎಂದು ರೆಡಿಟ್ ಪೋಸ್ಟ್‌ನಲ್ಲಿ ಬಣ್ಣಿಸಿದ್ದಾರೆ. ಇತ್ತೀಚೆಗೆ ಉದ್ಯೋಗಿಗಳು ತಮ್ಮ ಕೆಲಸದ ಗಂಟೆಗಳನ್ನು ಹೆಚ್ಚಿಸಬೇಕು ಎಂಬ ಚರ್ಚೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಈ ಪೋಸ್ಟ್ ಮಹತ್ವ ಪಡೆದುಕೊಂಡಿದೆ.
ಇನ್ಫೋಸಿಸ್‌ನ ಸಹ ಸಂಸ್ಥಾಪಕ ನಾರಾಯಣಮೂರ್ತಿ ಇತ್ತೀಚೆಗೆ ಉದ್ಯೋಗಿಗಳು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ಹೇಳಿಕೆ ನೀಡಿದ್ದರು. L & T ಕಂಪನಿಯ ಮುಖ್ಯಸ್ಥ ಎಸ್. ಎನ್. ಸುಬ್ರಮಣಿಯನ್ ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂದು ಹೇಳಿದ್ದರು. ಈ ಹೇಳಿಕೆಗಳ ಹಿನ್ನಲೆಯಲ್ಲಿ ಪರ ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿವೆ.