ಹೋಸದಿಲ್ಲಿ: ಅಯೋಧ್ಯೆ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದುತ್ವವಾದಿ ನಾಯಕಿ ಋತಂಭರಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಪದ್ಮ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾ ದಿನ ಘೋಷಿಸಲಾಯಿತು. ಮುಂದಿನ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ವಿಶ್ವ ಹಿಂದೂ ಪರಿಷತ್ತಿನ ಮಹಿಳಾ ಘಟಕ, ದುರ್ಗಾ ವಾಹಿನಿಯ ಸಂಸ್ಥಾಪಕಿ ಋತಂಭರ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. 1980 ಮತ್ತು 1990ರ ದಶಕಗಳಲ್ಲಿ ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರ ಅಭಿಯಾನದಲ್ಲಿ ಅವರು ದೇಶಾದ್ಯಾಂತ ಭಾಷಣಗಳನ್ನು ಮಾಡಿದ್ದರು. 1992 ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಅದರ ಹಿನ್ನಲೆಯಲ್ಲಿ ದೇಶಾದ್ಯಂತ ಕೋಮುಗಲಭೆಗಳು ಉಂಟಾಗಿದ್ದವು. ಈ ದ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಐದು ದಿನಗಳ ನಂತರ ಋತಂಭರ ಅವರನ್ನು ಬಂಧಿಸಲಾಗಿತ್ತು.
ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿ.ಬಿ.ಐ.) 32 ಮಂದಿಯ ಮೇಲೆ ಆರೋಪ ಹೊರಿಸಿತ್ತು. ಇದರಲ್ಲಿ ಋತಂಭರ ಹೆಸರು ಸಹ ಸೇರಿತ್ತು. 2020ರ ಸೆಪ್ಟೆಂಬರ್‌ನಲ್ಲಿ ಈ ಎಲ್ಲಾ 32 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.