ಲಕ್ನೊ: ಮಹಾ ಕುಂಭಮೇಳದ ವಿವಾದಿತ ಮಾಹಿತಿ ಪೋಸ್ಟ್ ಮಾಡುತ್ತಿದ್ದ 14 ಎಕ್ಸ್ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ಪ್ರದೇಶದ ಪೊಲೀಸ್ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್ ಅವರ ನಿರ್ದೇಶನದ ಮೇರೆಗೆ, ಸಾಮಾಜಿಕ ಮಾಧ್ಯಮಗಳ ಮೇಲ ತೀವ್ರ ನಿಗಾ ಇಡಲಾಗಿತ್ತು. ಅವುಗಳಲ್ಲಿ ಕೆಲವು ಖಾತೆಗಳನ್ನು ಪರಿಶೀಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.