Contact Information

Jattipalya, Chennenahalli, Magadi Road,
Bengaluru

ಕೈರಾನ, ಯುಪಿ: 2014ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾನಹಾನಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದ ಸಮಾಜವಾದಿ ಪಕ್ಷದ ಶಾಸಕ ನಹೀದ್ ಹಸನ್ ಅವರಿಗೆ ಕೈರಾನಾದ ನ್ಯಾಯಾಲಯ 11 ವರ್ಷಗಳಲ್ಲಿ 129 ವಿಚಾರಣೆಗಳನ್ನು ನಡೆಸಿದ ಬಳಿಕ 100 ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲರಾದಲ್ಲಿ ಒಂದು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಎನ್ ಡಿ ಎ ಪ್ರಧಾನಮಂತ್ರಿ ಅಭ್ಯರ್ಥಿಯಾಗಿದ್ದ ಮತ್ತು ಆಗಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಹಸನ್‌ಗೆ ಈ ಶಿಕ್ಷೆ ವಿಧಿಸಲಾಗಿದೆ. 2014ರ ಮಾರ್ಚ್ 28ರಂದು ಶಾಮ್ಲಿಯ ಆಜಾದ್ ಚೌಕದಲ್ಲಿ ನಡೆದ ಸಮಾರಂಭದಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧವೂ ಇವರು ಅವಮಾನಕರ ಮಾತುಗಳನ್ನಾಡಿದ ಆರೋಪ ಅವರ ಮೇಲಿತ್ತು.

ಕೈರಾನಾದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದ ಹಸನ್, ಮೋದಿ ಮತ್ತು ಮಾಯಾವತಿಯವರ ವೈಯಕ್ತಿಕ ಜೀವನ ಮತ್ತು ಬಿಎಸ್ಪಿಯ ಆನೆ ಚಿಹ್ನೆಯ ಬಗ್ಗೆ ಅಣಕವಾಡಿದ್ದರು. ಈ ಸಂಬಂಧ ಶಾಮ್ಲಿ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡಸಂಹಿತೆ ಸೆಕ್ಷನ್ 171(ಜಿ) (ಚುನಾವಣೆಯ ಸಂಬಂಧ ಸುಳ್ಳು ಹೇಳಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪೊಲೀಸರು ಬಳಿಕ ಆರೋಪಪಟ್ಟಿ ಸಲ್ಲಿಸಿದ್ದು, ಇದು ದೀರ್ಘಕಾಲ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಿತ್ತು.

ಕೈರಾನಾದಿಂದ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಸನ್, 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹುಕುಂ ಸಿಂಗ್ ವಿರುದ್ಧ ಪರಾಭವಗೊಂಡಿದ್ದರು.

Share:

administrator

Leave a Reply

Your email address will not be published. Required fields are marked *